Kannada NewsKarnataka NewsLatest

*ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಘಟನಾ ಸ್ಥಳಕ್ಕೆ ಬೆಳಗಾವಿ ಐಜಿಪಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ಗದಗ ನಗರದ ದಾಸರ ಓಣಿಯ ನಗರಸಭೆ ಉಪಾಧ್ಯಕ್ಷೆ  ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.‌ ಘಟನಾ ಸ್ಥಳಕ್ಕೆ ಬೆಳಗಾವಿ ಐಜಿಪಿ ವಿಕಾಸ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ನಾಲ್ವರನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಲೆಗೈದು, ಆರೋಪಿಗಳು ಪರಾರಿಯಾಗಿದ್ದಾರೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) ಪರಶುರಾಮ (55), ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. 

ಏಪ್ರಿಲ್ 17ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಆಗಿದ್ದ ಹಿನ್ನಲೆ ಕೊಪ್ಪಳ ಮೂಲದ ಸಂಬಂಧಿಗಳು ಗದಗಕ್ಕೆ ಆಗಮಿಸಿದ್ದರು. ಘಟನಾ ಸ್ಥಳಕ್ಕೆ ಶ್ವಾನದಳ, ಫೋರೆನ್ಸಿಕ್ ಟೀಂ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ನೇಮಗೌಡ, ಬೆಳಗಾವಿ ಐಜಿಪಿ ವಿಕಾಸ್ ಕುಮಾರ್ ಭೇಟಿ ನೀಡಿದ್ದಾರೆ.‌

Home add -Advt

Related Articles

Back to top button