Kannada NewsKarnataka News

*ಕಾಲೇಜಿಗೆ ಹೋಗಲು ರೆಡಿಯಾಗುತ್ತಿದ್ದಾಗಲೇ ಹೃದಯಾಘಾತ: ಉಪನ್ಯಾಸಕಿ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರೆದಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ಉಪನ್ಯಾಸಕಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಗದಗ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪ್ರಭಾ ಕಲ್ಮಠ (48) ಹೃದಯಾಘಾತಕ್ಕೆ ಸಾವನ್ನಪ್ಪಿದ ಮಹಿಳೆ. ಸೊರಟೂರಿನ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಎಂದಿನಂತೆ ಕಾಲೇಜಿಗೆ ಹೋಗಲು ಬೆಳಿಗ್ಗೆ ರೆಡಿಯಾಗುತ್ತಿದ್ದರು. ಈ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.


Home add -Advt

Related Articles

Back to top button