Kannada NewsKarnataka NewsLatest
*ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಡ್ರ್ಯಾಗರ್ ನಿಂದ ಇರಿದು ಹತ್ಯೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದವನನ್ನು ದುಷ್ಕರ್ಮಿಗಳು ಡ್ರ್ಯಾಗರ್ ನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ.
ತಾಜ್ ಹೋಟೆಲ್ ನಲ್ಲಿ ಊಟಕ್ಕೆ ಕುಳಿತಿದ್ದ ಬಸವರಾಜ್ ಮಮ್ಮಟ (21) ಎಂಬ ಯುವಕನನ್ನು ಬೈಕ್ ನಲ್ಲಿ ಬಂದಿದ್ದ ನಲವರು ದುಷ್ಕರ್ಮಿಗಳು ಇರಿದು ಕೊಂದಿದ್ದಾರೆ. ದೃಶ್ಯವನ್ನು ಕಣ್ಣಾರೆ ಕಂಡ ಹೋಟೆಲ್ ಸಿಬ್ಬಂದಿ, ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಪ್ರಭುಗೌಡ ಪಾಟೀಲ್ ಭೇಟಿ ನೀಡಿದ್ದಾರೆ. ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.