ಕೊರೊನಾದಿಂದ ಗುಣಮುಖರಾದ ಮಹಿಳೆಗೆ ರೇಷ್ಮೆ ಸೀರೆ ನೀಡಿ ಬೀಳ್ಕೊಡುಗೆ

ಪ್ರಗತಿವಾಹಿನಿ ಸುದ್ದಿ; ಗದಗ: ಕೊರೊನಾ ಸೋಂಕಿನಿಂದ ಗುಣಮುಖರಾದ ಗದಗದ 59 ವರ್ಷದ ಮಹಿಳೆಗೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ರೇಷ್ಮೆ ಸೀರೆ, ಆಹಾರ ಸಾಮಗ್ರಿಗಳನ್ನು ನೀಡಿ ಸತ್ಕರಿಸಿ ಬೀಳ್ಕೊಟ್ಟರು.

ಗುಣಮುಖರಾದ ಮಹಿಳೆಯನ್ನು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಿಬ್ಬಂದಿ ಚೆಪ್ಪಾಳೆ ತಟ್ಟುವುದರ ಮೂಲಕ ಆಸ್ಪತ್ರೆಯಿಂದ ಹೊರ ಕರೆತಂದು, ಮಹಿಳೆಗೆ ರೇಷ್ಮೆ ಸೀರೆ, ಮಾಸ್ಕ್, ಸ್ಯಾನಿಟೈಸರ್, ಆಹಾರ ಸಾಮಗ್ರಿಗಳನ್ನ ನೀಡಿದರು. ಆಸ್ಪತ್ರೆಯಿಂದ ಹೊರಗಡೆ ಬಂದ ಮಹಿಳೆ ವೈದ್ಯರಿಗೆ, ಜಿಲ್ಲಾಡಳಿತ ಸಿಬ್ಬಂದಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅನೇಕ ಅಧಿಕಾರಿಗಳು ಉಪಸ್ಥಿತಿ ಇದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವೂ 14 ದಿನಗಳ ಕಾಲ ಮಹಿಳೆ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರೊಬ್ಬರು ಬಿಡುಗಡೆಯಾಗುತ್ತಿರುವುದು ಜಿಲ್ಲಾಡಳಿತ, ಜಿಲ್ಲಾ ವೈದ್ಯಕೀಯ ಸಿಬ್ಬಂದಿ ಮತ್ತು ಜಿಲ್ಲೆಯ ಜನತೆಯಲ್ಲಿ ಹರ್ಷ ಮೂಡಿಸಿದೆ.

ರಂಗನವಾಡಿ ಗಲ್ಲಿ ನಿವಾಸಿ 59 ವರ್ಷದ ಮಹಿಳೆಯಲ್ಲಿ ಏಪ್ರಿಲ್ 16 ರಂದು ಸೋಂಕು ದೃಢಪಟ್ಟಿತ್ತು. ಮಹಿಳೆ ಅದೇ ಗಲ್ಲಿಯ ರೋಗಿ ನಂ 166, 80 ವರ್ಷದ ವೃದ್ಧೆಯ ಸಂಪರ್ಕದಲ್ಲಿದ್ದರು. ಹಾಗಾಗಿ ಇವರಿಗೆ ಗದಗ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ತಂಡಗಳು ನಿರಂತರವಾಗಿ ಅವರಿಗೆ ಸುಮಾರು 14 ದಿನಗಳ ಕಾಲ ಚಿಕಿತ್ಸೆ ನೀಡಿದ್ದು, ಈಗ ಮಹಿಳೆ ಗುಣಮುಖರಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button