Latest

ತುಂಬು ಗರ್ಭಿಣಿಗೆ ಸೋಂಕು; ಆಸ್ಪತ್ರೆಯೇ ಸೀಲ್ ಡೌನ್

ಪ್ರಗತಿವಾಹಿನಿ ಸುದ್ದಿ; ಗದಗ: ತುಂಬು ಗರ್ಭಿಣಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನೇ ಸೀಲ್‍ಡೌನ್ ಮಾಡಲಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಕೆ.ಸಿ ರಾಣಿ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಶಿರಹಟ್ಟಿ ತಾ. ಗೊಜನೂರು ಗ್ರಾಮದ ಗರ್ಭಿಣಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಆತಂಕ ಮೂಡಿದೆ. ಹೀಗಾಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ.

Home add -Advt

ಸೋಂಕಿತ ಮಹಿಳೆಯ ಬ್ಲಡ್ ಟೆಸ್ಟ್, ಓಪಿಡಿ ಮಾಡಿದ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆ ಮಾಡಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಟ್ರಾವೆಲ್ ಹಿಸ್ಟರಿ ಇರದ ತುಂಬು ಗರ್ಭಿಣಿಗೆ ಸೋಂಕು ದೃಢಪಟ್ಟಿದ್ದು, ಕುಟುಂಬಸ್ಥರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಇನ್ನಷ್ಟು ಗರ್ಭಿಣಿಯರು ಚಿಕಿತ್ಸೆ ಪಡೆದು ಹೋಗಿದ್ದು ಅವರ ಪತ್ತೆ ಕಾರ್ಯ ಆರಂಭವಾಗಿದೆ. ಆರೋಗ್ಯ ಇಲಾಖೆಯಿಂದ ಆಸ್ಪತ್ರೆಯಲ್ಲಿ ನೋಂದಣಿ ಮಾಡಿದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ನಡುವೆ ಇಡೀ ಆಸ್ಪತ್ರೆಯನ್ನು ಸೈನಿಟೈಜರ್ ಮಾಡಲಾಗಿದೆ.

Related Articles

Back to top button