
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ಡಿ ಗ್ರೂಪ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಆಯುಷ್ ಇಲಕಹೆ ನಡೆಸುತ್ತಿದ್ದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. 35 ವರ್ಷದ ಮೈಲಾರಲಿಂಗೇಶ್ವರ ಆತ್ಮಹತ್ಯೆಗೆ ಶರಣಾದ ನೌಕರ.
ಮೈಲಾರಕಿಂಗ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದುರೆ ಗ್ರಾಮದ ನಿವಾಸಿ. 2019ರಿಂದ ಬೆಟಗೇರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಆಸ್ಪತ್ತೆಯಲ್ಲಿ ಎಲ್ಲರೊಂದಿಗೂ ಚೆನ್ನಾಗಿಯೇ ಮಾತನಾಡಿಕೊಂಡಿದ್ದ ಮೈಲಾರಲಿಂಗ ಇಂದು ಆಸ್ಪತ್ರೆಯ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




