Kannada NewsKarnataka NewsLatest

*ಗದಗದಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮಕ್ಕೆ ಸಿಎಂ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Home add -Advt

Related Articles

Back to top button