Latest
ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟುಹೋದ ಹೆತ್ತವರು

ಪ್ರಗತಿವಾಹಿನಿ ಸುದ್ದಿ; ಗದಗ: ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಬಸ್ ನಿಲ್ದಾಣದಲ್ಲಿ ಇಟ್ಟು ಹೋಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣದ ಗೇಟ್ ಒಳಭಾಗದಲ್ಲಿ ನವಜಾತ ಗಂಡು ಮಗು ಪತ್ತೆಯಾಗಿದೆ. ಹಸಿವಿನಿಂದ ಅಳುತ್ತಿದ್ದ ಮಗುವಿನ ಧ್ವನಿ ಕೇಳಿ ಸಾರ್ವಜನಿಕರು ಗಮನಿಸಿದಾಗ ಬಟ್ಟೆಯಲ್ಲಿ ಮಗುವನ್ನು ಸುತ್ತಿ ಇಟ್ಟಿರುವುದು ಪತ್ತೆಯಾಗಿದೆ.
ಮಗುವನ್ನು ರಕ್ಷಿಸಿದ ಸಾರ್ವಜನಿಕರು ಗಜೇಂದ್ರಗಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗುವನ್ನು ಗದಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.




