ಪ್ರಗತಿವಾಹಿನಿ ಸುದ್ದಿ; ಗದಗ: ಅನಾರೋಗ್ಯದಿಂದ ಬಳಲುತ್ತಿದ್ದ ಗದಗ ಜಿಲ್ಲೆಯ ಹಾಲಕೇರಿ ಶ್ರೀ ಅನ್ನದಾನೇಶ್ವರ ಮಠದ ಅಭಿನವ ಅನ್ನದಾನೇಶ್ವರ ಪರಮಪೂಜ್ಯ ಶ್ರೀ ಡಾ.ಸಂಗನಬಸವ ಸ್ವಾಮೀಜಿಗಳು ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರು.
ಅಪೋಲೋ ಆಸ್ಪತ್ರೆಗೆ ತೆರಳಿದ ಸಿಎಂ ಬೊಮ್ಮಾಯಿ, ಲಿಂಗೈಕ್ಯರಾದ ಡಾ.ಸಂಗನಬಸವ ಮಹಾಸ್ವಾಮಿಗಳ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ , ಸಿ ಸಿ ಪಾಟೀಲ್ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಿಎಂ, ಶ್ರೀಗಳ ಅಗಲಿಕೆ ತೀವ್ರ ನೋವು ತಂದಿದೆ. ಇದು ರಾಜ್ಯದ ಆಧ್ಯಾತ್ಮಿಕ, ಸಾಮಾಜಿಕ ಕ್ಷೇತ್ರಕ್ಕಾದ ದೊಡ್ಡ ನಷ್ಟ. 128 ಶಾಖಾ ಮಠ, 60ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅವರು ಸಮಾಜಕ್ಕೆ ಅವಿರತ ಸೇವೆ ಸಲ್ಲಿಸಿದ್ದರು ಎಂದು ಸಂತಾಪ ಸೂಚಿಸಿದರು.
ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಅವರ ಅಪಾರ ಭಕ್ತಬಳಗ, ಅನುಯಾಯಿಗಳು ಹಾಗೂ ಶಿಷ್ಯವೃಂದಕ್ಕೆ ಈ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಆತ್ಮಹತ್ಯೆಗೆ ಶರಣಾದ ನವ ದಂಪತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ