
ಪ್ರಗತಿವಾಹಿನಿ ಸುದ್ದಿ; ಗದಗ: ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆ ಕಬಲಾಯತಕಟ್ಟಿ ತಾಂಡದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಎಂದು ಗುರುತಿಸಲಾಗಿದೆ. ಲಕ್ಷ್ಮಣ ಲಮಾಣಿ, ರಾತ್ರಿ ಮಲಗಿದ್ದ ವೇಳೆ ಬಟ್ಟೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಪತ್ನಿ ಲಲಿತ ಹಾಗೂ ಆಕೆಯ ಪ್ರಿಯಕರ ಸೋಮಪ್ಪ ಲಮಾಣಿ ಈ ಕೃತ್ಯ ನಡೆಸಿದ್ದಾರೆ.
4 ವರ್ಷಗಳಿಂದ ಲಲಿತಾ ಹಾಗೂ ಸೋಮಪ್ಪ ನಡುವೆ ಅಕ್ರಮ ಸಂಬಂಧ ಇತ್ತು. ಈ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದ. ಇದೇ ಕಾರಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ.
ಸಧ್ಯ ಮುಳುಗುಂದ ಪೊಲೀಸರು ಆರೋಪಿ ಲಲಿತಾ ಹಾಗೂ ಪ್ರಿಯಕರ ಸೋಮಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.