ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಗೇಯ್ಲ್) ನಲ್ಲಿ ಎಕ್ಸಿಕುಟೀವ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಫೆಬ್ರವರಿ 15ರಿಂದ ಅರ್ಜಿ ಪ್ರಕ್ರಿಯೆಗಳು ಆರಂಭವಾಗಲಿವೆ. ಎಕ್ಸಿಕ್ಯೂಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್) ಎಕ್ಸಿಕ್ಯೂಟಿವ್ ಟ್ರೈನಿ (ಎಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತಾ ಮಾನದಂಡಗಳು: ಎಕ್ಸಿಕ್ಯುಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ ಮತ್ತು ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು.
ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಮೆಕ್ಯಾನಿಕಲ್ / ಪ್ರೊಡಕ್ಷನ್ / ಪ್ರೊಡಕ್ಷನ್ & ಇಂಡಸ್ಟ್ರಿಯಲ್ / ಮ್ಯಾನುಫ್ಯಾಕ್ಚರಿಂಗ್ / ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್‌ನಲ್ಲಿ ಎಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು.
ಎಕ್ಸಿಕ್ಯುಟಿವ್ ಟ್ರೈನಿ (ಎಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಅನ್ವಯವಾಗುವುದಿಲ್ಲ.
ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಗೇಯ್ಲ್ ನ ಅಧಿಕೃತ ವೆಬ್ ಸೈಟ್ gailonline.comಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ