Belagavi NewsBelgaum NewsKannada NewsKarnataka News
*ಸ್ಕೌಟ್ಸ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಗಜಾನನ ಮನ್ನಿಕೇರಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷರು (ಸ್ಕೌಟ್ಸ್ ) ಹಾಗೂ ಬೆಳಗಾವಿ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಬಸಲಿಂಗಪ್ಪ ಮನ್ನಿಕೇರಿ ಯವರು ಸ್ಕೌಟ್ಸ್ ಸಂಸ್ಥೆಯಲ್ಲಿ ಸಕ್ರಿಯವಾಗಿ 40 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಷ್ಟ್ರ ರಾಜ್ಯ ಮತ್ತು ಜಿಲ್ಲಾಮಟ್ಟದ ಕಾರ್ಯಕ್ರಮಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಸಂಸ್ಥೆಯವರು ರಾಷ್ಟ್ರಮಟ್ಟದ. “ಬಾರ್ ಟು ಸಿಲ್ವರ್ ಸ್ಟಾರ್” ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ 75 ನೆಯ ರಾಷ್ಟ್ರೀಯ ಜಾಂಬೂರಿಯಲ್ಲಿ ಇಂದು 26 ರಂದು ಬುಧವಾರ ರಂದು ಲಕ್ನೋದ ರಾಜ್ಯ ಭವನದಲ್ಲಿ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಈ ವೇಳೆ ಗಜಾನನ ಮನ್ನಿಕೇರಿ ಅವರನ್ನು ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂದ್ಯಾ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿನಂದಿಸಿದ್ದಾರೆ.



