Karnataka NewsLatest
*ಗಾಳಿ ಆಂಜನೇಯ ದೇವಸ್ಥಾನ ಮುಜರಾಯಿ ಇಲಾಖೆ ಸುಪರ್ದಿಗೆ: ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನ ಮುಜರಾಯಿ ಇಲಾಖೆ ಸುಪರ್ದಿಗೆ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಗಾಳಿ ಆಮ್ಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಕ್ರಮ ಮೇಲ್ನೋಟಕ್ಕೆ ಸರಿಯಾಗಿಯೇ ಇದೆ. ಮುಜರಾಯಿ ಇಲಾಖೆ ಸುಪರ್ದಿಗೆ ನೀಡಿದ್ದು ತಪ್ಪು ಎನ್ನಲಾಗದು ಎಂದು ಹೈಕೋರ್ಟ್ ತಿಳಿಸಿದೆ.
ಗಾಳಿ ಆಂಜನೇಯ ದೇವಸ್ಥಾನದ ಹುಂಡಿ ಹಣ ದುರುಪಯೋಗ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.