
ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ರಾಜಶೇಖರ್ ಆತ್ಮಹತ್ಯೆಗೆ ಶರಣಾಗಿರುವ ಹೆಡ್ ಕಾನ್ಸ್ ಟೇಬಲ್. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಠಾಣೆ ಹೆಡ್ ಕಾನ್ಸ್ ಟೇಬಲ್ ಆಗಿದ್ದ ರಾಜಶೇಖರ್, ಆನ್ ಲೈನ್ ಜೂಜಾಟದ ಚಟಕ್ಕೆ ಬಿದ್ದು ಲಕ್ಷ ಲಕ್ಷ ಕೈ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಪತ್ನಿಯ ಚಿನ್ನಾಭರಣಗಳನ್ನು ಅಡ ಇಟ್ಟಿದ್ದರು.
ಸಾಲ ಮಾಡಿಕೊಂಡಿದ್ದು, ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾಗಿ ವಾರದ ಹಿಂದಷ್ಟೇ ತಂದೆ-ತಾಯಿ ಬಳಿಯೂ ಹೇಳಿಕೊಂಡು ಅಳಲು ತೋಡಿಒಂಡಿದ್ದರು. ಇದೀಗ ಇದ್ದಕ್ಕಿದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.