ಪ್ರಗತಿವಾಹಿನಿ ಸುದ್ದಿ, ನೇಸರಗಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನೂರು ಗ್ರಾಮದಲ್ಲಿ ಜೂಜಾಟ ಆಡುತ್ತಿದ್ದವರ ಪೊಲೀಸರು ದಾಳಿ ನಡೆಸಿ 11 ಜನ ಆರೋಪಿತರನ್ನು ಬಂಧಿಸಿದ್ದಾರೆ.
ಆರೋಪಿತರಿಂದ 17,480 ರೂ. ನಗದು ಮತ್ತು 6 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ನೇಸರಗಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗುರುರಾಜ್ ಕಲ್ಯಾಣಶೆಟ್ಟಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಸ್ ಆರ್. ದೇಸಾಯಿ. ವಿನಯ್ ಯರಗಟ್ಟಿಮಠ, ಅರಲಿಕಟ್ಟಿ, ಮುರಗೋಡ ದಾಳಿಯಲ್ಲಿ ಪಾಲ್ಗೊಂಡಿದ್ದರು. ನೇಸರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಟ್ರೋಲ್ ಗೆ ಗುರಿಯಾಯ್ತು ಲಲಿತ್ ಮೋದಿ ‘ವಜ್ರದ ಚಮಚ’
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ