Latest

ಅಪಾರ್ಟ್ ಮೆಂಟ್ ನಲ್ಲಿ ಜೂಜಾಟ ; 8 ಜನರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.

ಕೃಷ್ಣ, ಮಹೇಶ್, ಮಂಜುನಾಥ್, ವಿಶ್ವನಾಥ್, ರಘು, ಪ್ರಸಾದ್, ಲಕ್ಷ್ಮಣ, ಹರೀಶ್ ಬಂಧಿತ ಆರೋಪಿಗಳು.

ಅಪಾರ್ಟ್ ಮೆಂಟ್ ನ್ನೇ ತಮ್ಮ ಜೂಜಾಟ ಕೇಂದ್ರವನ್ನಾಗಿ ಆರೋಪಿಗಳು ಮಾಡಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 8 ಜನರನ್ನು ಬಂಧಿಸಿದ್ದು, 2 ಲಕ್ಷ 10 ಸಾವಿರ ರೂಪಾಯಿ ಹಣ ಹಾಗೂ ಇಸ್ಪೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button