Latest

ಸಿಎಂ ಬೊಮ್ಮಾಯಿ ಭೇಟಿಯಾದ ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಭಾರತೀಯ ಚಿತ್ರರಂಗದ ಹಿರಿಯ ನಟ-ನಟಿಯರನ್ನು, ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದೆ.

ಅ.21ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿದೆ. ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ಗೆ ಆಹ್ವಾನಿಸಿದರು.

Home add -Advt

ಇಂದು ಬೆಂಗಳೂರು ನಗರದ ರೇಸ್ ಕೋರ್ಸ್ ರಸ್ತೆಯಲ್ಲಿನ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಅಶ್ವಿನಿ, ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಪ್ರೀ ರಿಲೀಸ್ ಇವೆಂಟ್ ಗೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಉಪಸ್ಥಿತರಿದ್ದರು.

ರಾಣಿ ಚೆನ್ನಮ್ಮ ಸೇರಿದಂತೆ 3 ವಿಶ್ವವಿದ್ಯಾಲಯಗಳಿಗೆ KAS ಅಧಿಕಾರಿಗಳ ನೇಮಕ

https://pragati.taskdun.com/latest/belagavi-rani-chennamma-univercity3-univercitykas-officersstate-govt/

Related Articles

Back to top button