Latest

’ಗಂಧದಗುಡಿ’ ಕರ್ನಾಟಕ ನೈಸರ್ಗಿಕ ಸೌಂದರ್ಯಕ್ಕೆ ಗೌರವ; ಟ್ರೇಲರ್ ನೋಡಿ ಪ್ರಶಂಸೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿದ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಅಪ್ಪು ಲಕ್ಷಾಂತರ ಜನರ ಮನಸ್ಸಿನಲ್ಲಿ ಅಮರರಾಗಿದ್ದಾರೆ. ಗಂಧದಗುಡಿ ಸಾಕ್ಷ್ಯಚಿತ್ರ ಪ್ರಕೃತಿ ಮಾತೆ, ಪರಿಸರ ಸಂರಕ್ಷಣೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯಕ್ಕೆ ಗೌರವವಾಗಿದೆ ಎಂದು ತಿಳಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಒಬ್ಬ ತೇಜಸ್ಸಿನ ವ್ಯಕ್ತಿಯಾಗಿದ್ದರು. ಅವರು ಅಪ್ರತಿಮ ಪ್ರತಿಭಾವಂತ. ಈ ಪ್ರಯತ್ನಕ್ಕೆ ನನ್ನ ಸುಭಾಷಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಗಂಧದಗುಡಿ ಟ್ರೇಲರ್ ನ್ನು ಪ್ರಧಾನಿ ಮೋದಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಇದೀಗ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

Home add -Advt

ಗಂಧದಗುಡಿ ಟ್ರೇಲರ್ ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿದ್ದು, ಪುನೀತ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ
ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಬಿಡುಗಡೆ

https://pragati.taskdun.com/latest/gandhadagudidocumentrytrailer-releasepuneeth-rajkumar/

Related Articles

Back to top button