Latest

ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಿ.ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೇ ಚಿತ್ರ ಗಂಧದಗುಡಿ ಸಾಕ್ಷ್ಯ ಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡಿಗಡೆಯಾಗಿದೆ.

ಬೆಂಗಳೂರಿನ ನರ್ತಕಿ ಥಿಯೇಟರ್ ನಲ್ಲಿ ಪುನೀತ್ ರಾಜ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೇಲರ್ ನ್ನು ಪತ್ನಿ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದರು.

ಅದ್ಧೂರಿ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ದಂಪತಿ, ಸ್ಯಾಂಡಲ್ ವುಡ್ ನ ನಟ, ನಟಿಯರು ಭಾಗಿಯಾಗಿದ್ದರು. ಗಂಧದಗುಡಿ ಟ್ರೇಲರ್ ವೀಕ್ಷಣೆ ವೇಳೆ ಪುನೀತ್ ಪತ್ನಿ ಅಶ್ವಿನಿ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆಯಿತು.

2021ರಂದು ಅಕ್ಟೋಬರ್ 29ರಂದು ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದರು. ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರ ಅಕ್ಟೋಬರ್ 28ರಂದು ರಾಜ್ಯಾದ್ಯಂತ ಬಿಡಿಗಡೆಯಾಗಲಿದೆ.

Home add -Advt

ಕರ್ನಾಟಕದ ಕಾಡು ಉಳಿಸಿ ಎಂಬ ಡಾ.ರಾಜ್ ಕುಮಾರ್ ಅವರ ಸಂದೇಶದ ಮರುಜನ್ಮವೇ ಹೊಸ ಗಂಧದಗುಡಿ ಸಾರಾಂಶ. ಈ ಸಾಕ್ಷ್ಯಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಕಾಣಲ್ಲ. ಬದಲಾಗಿ ಪುನೀತ್ ಓರ್ವ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಂದಿದ್ದಾರೆ. ವೈಲ್ಡ್ ಕರ್ನಾಟಕ ಖ್ಯಾತಿಯ ನಿರ್ದೇಶಕ ಅಮೋಘವರ್ಷ ಈ ಸಾಕ್ಷ್ಯ ಚಿತ್ರದ ನಿರ್ದೇಶಕರಾಗಿದ್ದಾರೆ.
ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಪೊಲೀಸ್ ಸಸ್ಪೆಂಡ್

https://pragati.taskdun.com/latest/vijayapurapolice-suspendedsiddaramaiah/

Related Articles

Back to top button