Kannada NewsNationalPolitics

*ಗಾಂಧಿ ಜಯಂತಿ: ರಾಜ್ ಘಾಟ್ ಗೆ ತೆರಳಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ*

ಸರ್ವಧರ್ಮ ಪ್ರಾರ್ಥನೆಯಲ್ಲಿ ಭಾಗಿ

ಪ್ರಗತಿವಾಹಿನಿ ಸುದ್ದಿ: ಇಂದು ಗಾಂಧಿ ಜಯಂತಿ. ರಾಅಷ್ಟ್ರಪಿತ ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ ಘಾಟ್‌ ಗೆ ತೆರಳಿ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.

ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ಗೆ ಆಗಮಿಸಿ, ರಾಷ್ಟ್ರಪಿತನ ಜನ್ಮದಿನದ ಅಂಗವಾಗಿ ಗಾಂಧೀಜಿಯವರ ಸಮಾಧಿಯ ಬಳಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ವಿಜಯ್ ಘಟ್‌ನಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಇದೇ ವೇಳೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ರಾಜ್‌ಘಾಟ್‌ನಲ್ಲಿ ನಡೆದ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು, ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಉಪಾಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರು ಈ ಸಂದರ್ಭದಲ್ಲಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಇಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ನಾಯಕರು ಮತ್ತು ನಾಗರಿಕರು ಗಾಂಧಿ ಜಯಂತಿ ಕಾಅರ್ಯಕ್ರಮ, ಸ್ವಚ್ಛತಾ ಅಭಿಯಾಅನದಲ್ಲಿ ಪಾಲ್ಗೊಂಡಿದ್ದಾರೆ. ಶಾಂತಿ, ಅಹಿಂಸೆ ಮತ್ತು ಸ್ವಚ್ಛತೆಯ ಕುರಿತಾದ ಅವರ ಸಂದೇಶವನ್ನು ಸ್ಮರಿಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button