ಹಿರೇಬಾಗೇವಾಡಿಯಲ್ಲಿ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯಲ್ಲಿ 1924ರಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವದ ನಿಮಿತ್ತ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಲಿದ್ದು, ಬೃಹತ್ ರ್ಯಾಲಿ ನಡೆಯಲಿದೆ. ಹಿರೇಬಾಗೇವಾಡಿಯ ಚಾವಡಿಕೂಟದ ಲಕ್ಷ್ಮೀ ದೇವರ ಗುಡಿಯಿಂದ 9 ಗಂಟೆಗೆ ಆರಂಭವಾಗುವ ರ್ಯಾಲಿ ಫಡಿಬಸವೇಶ್ವರ ದೇವಸ್ಥಾನದವರೆಗೆ ಸಾಗಿ, ಸಭೆಯಾಗಿ ಮಾರ್ಪಡಲಿದೆ.
10 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಜ್ಞಾವಿಧಿ ಸಮಾರಂಭದೊಂದಿಗೆ ಝೂಮ್ ಮೂಲಕ ಸಂಪರ್ಕಗೊಳ್ಳುವುದಲ್ಲದೆ, ಸಮಾರಂಭವನ್ನು ಸಹ ಆಯೋಜಿಸಲಾಗಿದೆ. ಸಾರ್ವಜನಿಕರು ಪಕ್ಷ ಭೇದ ಮರೆತು ಹೆಚ್ಚಿ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ