
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ -ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದ ಚಂದೂರ್ ಗ್ರಾಮದಲ್ಲಿ ಎಸ್ ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.
55 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಸಂಪೂರ್ಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯುತ್ತಿದ್ದು, ಜನರ ಸಹಕಾರವೇ ಇದಕ್ಕೆ ಕಾರಣ ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ಹೇಳಿದರು.

ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ