Belagavi NewsBelgaum NewsKannada NewsKarnataka NewsLatest
*ಬೆಳಗಾವಿಯ ಖಡಕ್ ಗಲ್ಲಿಯ ಗಣೇಶೋತ್ಸವ: ಮೆರವಣಿಗೆಯಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಖಡಕ್ ಗಲ್ಲಿಯ ಗಣೇಶೋತ್ಸವದ ಆಚರಣೆಗೆ 74 ವರ್ಷಗಳು ಪೂರ್ಣಗೊಂಡಿದ್ದು, ಈ ವರ್ಷದ 75ನೇ ಗಣೇಶೋತ್ಸವದ ಕಾರ್ಯಕ್ರಮವನ್ನು ಇಲ್ಲಿನ ಗಜಾನನ ಉತ್ಸವ ಮಂಡಳಿಯವರು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.

ಈ ನಿಟ್ಟಿನಲ್ಲಿ ಶನಿವಾರ ನಡೆದ, ಬೆಳ್ಳಿ ಲೇಪಿತ ಬೃಹತ್ ವಿಘ್ನ ವಿನಾಶಕನ ಮೂರ್ತಿಯ ಬೃಹತ್ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿ, ಅಪಾರ ಜನಸ್ತೋಮದ ನಡುವೆ ಪೂಜೆ ಸಲ್ಲಿಸಿದರು.
ಈ ವೇಳೆ ಶಾಸಕ ಆಸೀಫ್ ಸೇಠ್ ಮತ್ತಿತರರು ಉಪಸ್ಥಿತದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ