ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಕೊರೊನಾ ವೈರಸ್ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರಿಂದ ಮುಂಜಾಗೃತ ಕ್ರಮವಾಗಿ ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ತುರ್ತು ಸಭೆ ನಡೆಸಿದರು.
ಸದಲಗಾ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಈ ಸಭೆಯಲ್ಲಿ ಪಟ್ಟಣದಲ್ಲಿ ಆಗಬಹುದಾದ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಸೂಚಿಸಿದರು. ಯಾವುದೇ ಕಾರಣದಿಂದ ಜನರು ಪ್ಯಾನಿಕ್ ಆಗದಂತೆ ಮತ್ತು ಎಲ್ಲ ರೀತಿಯ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ತಾವೇ ಸ್ವತಃ ಉಚಿತವಾಗಿ 5000 ಮಾಸ್ಕಗಳನ್ನು ನೀಡಿ ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ವಿತರಿಸಬೇಕೆಂದು ತಿಳಿಸಿದರು.
ಈ ಸಭೆಯಲ್ಲಿ ತಾಲೂಕಾ ಆರೋಗ್ಯಧಿಕಾರಿ ಡಾ. ಶಿಂಧೆ , ಪಟ್ಟಣದ ಎಲ್ಲ ವೈದ್ಯರು ಮತ್ತು ಪುರಸಭೆ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ