ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ -ಸಿಡಿಲು ಬಡಿದು ಜಾನುವಾರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಸಂಬಂಧಿಸಿದ ಕುಟುಂಬಕ್ಕೆ ಚೆಕ್ ವಿತರಿಸಿದರು.
ಕಳೆದ ಜೂನ್ ತಿಂಗಳಲ್ಲಿ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಸಿಡಿಲು ಬಡಿದು ಈರವ್ವಾ ಅಪ್ಪಯ್ಯಾ ಡಾಂಗೆ ಅವರಿಗೆ ಸೇರಿದ್ದ 2 ಜಾನುವಾರುಗಳು ಮೃತಪಟ್ಟಿದ್ದವು.
ಶಾಸಕ ಗಣೇಶ ಹುಕ್ಕೇರಿ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೋಡಕುರಳಿ ಗ್ರಾಮಕ್ಕೆ ತೆರಳಿ ಈರವ್ವಾ ಅವರಿಗೆ ಶಾಸಕರು ಪರಿಹಾರದ ಚೆಕ್ ಹಸ್ತಾಂತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ