ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಣ್ಮನ ಸೆಳೆಯುವ ಗಣೇಶ ವಿಸರ್ಜನೆ ಮೆರವಣಿಗೆಗೆ ಬೆಳಗಾವಿಯಲ್ಲಿ ಈಗ ಸ್ವಲ್ಪ ಹೊತ್ತಿನ ಮೊದಲು ಚಾಲನೆ ನೀಡಲಾಯಿತು. ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮೆರವಣಿಗೆಗೆ ಚಾಲನೆ ನೀಡಿದರು.
ಪೊಲೀಸ್ ಆಯುಕ್ತ ಲೋಕೇಶ್ ಕುಮಾರ, ಉಪ ಪೊಲೀಸ್ ಆಯುಕ್ತರಾದ ಸೀಮಾ ಲಾಟಕರ್, ಯಶೋಧಾ ವಂಟಗೂಡಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದಾರೆ.
ಬೆಳಗಾವಿ ನಗರದ ವಿವಿಧ ಗಲ್ಲಿಗಳಲ್ಲಿ ಸ್ಥಾಪಿಸಲಾಗಿದ್ದ ಸುಮಾರು 350ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಮೆರವಣಿಗೆ ಮೂಲಕ ಸಾಗಿಸಿ ವಿಸರ್ಜಿಸಲಾಗುತ್ತದೆ. ಈಗ ಆರಂಭವಾಗಿರುವ ಮೆರವಣಿಗೆ ನಾಳೆ ಮಧ್ಯಾಹ್ನದವರೆಗೂ ಮುಂದುವರಿಯಲಿದೆ. ಲಕ್ಷಾಂತರ ಜನರು ರಸ್ತೆಯ ಇಕ್ಕೆಲಗಳಲ್ಲೂ ನಿಂತು ಗಣೇಶೋತ್ಸವ ಮೆರವಣಿಗೆಯನ್ನು ವೀಕ್ಷಿಸುವರು.
ಗಣೇಶ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 3 ಸಾವಿರಕ್ಕೂ ಪೊಲೀಸರನ್ನು ನೇಮಿಸಲಾಗಿದೆ. ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ಸಂಬಂಧಿಸಿದ ಸುದ್ದಿಗಳು –
ಗುರುವಾರ ಗಣೇಶ ಸಂಭ್ರಮಕ್ಕೆ ತೆರೆ; ಲಕ್ಷಾಂತರ ಜನರಿಂದ ವೀಕ್ಷಣೆ ನಿರೀಕ್ಷೆ
ಗಣೇಶ ವಿಸರ್ಜನೆ: ವಾಹನ ಸಂಚಾರ ಮಾರ್ಗಗಳ ಬದಲಾವಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ