
ಪ್ರಗತಿವಾಹಿನಿ ಸುದ್ದಿ: ಗಣೇಶ ವಿಸರ್ಜನೆ ವೇಳೆ ಅವಘಡ ಸಂಭವಿಸಿದ್ದು, ಬೆಳಗಾವಿ ನಗರದಲ್ಲಿ ವ್ಯಕ್ತಿ ಓರ್ವರು ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಬೆಳಗಾವಿ ನಗರದ ಜಕ್ಕೇರಿ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಸ್ಥಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವ ವೇಳೆ ದುರಂತ ಸಂಭವಿಸಿದೆ. ಕೆರೆಗೆ ಬಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಲು ಯತ್ನಿಸಿದ್ದಾರೆ. ತಕ್ಷಣ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು.
ಮೃತ ವ್ಯಕ್ತಿ ಬೆಳಗಾವಿ ನಗರದ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ್ (33) ಎಂದು ಗುರುತಿಸಲಾಗಿದೆ.