Belagavi NewsBelgaum NewsKannada NewsKarnataka NewsLatestPolitics
*ಸ್ವತಃ ಗ್ರಾಮಕ್ಕೆ ತೆರಳಿ ಅಭಿವೃದ್ಧಿ ಅಗತ್ಯತೆ ಸಮೀಕ್ಷೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಗಣೇಶಪುರಕ್ಕೆ ತೆರಳಿ ಗ್ರಾಮದಲ್ಲಿ ಆಗಬೇಕಿರುವ ರಸ್ತೆಗಳ ಅಭಿವೃದ್ಧಿ ಕುರಿತು ಪರಿಸೀಲನೆ ನಡೆಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಗಣೇಶಪುರದಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಸಚಿವರು ತಿಳಿಸಿದರು.

ಸ್ಥಳೀಯ ಮಾಲಸ ಕಾಲೋನಿ ಹಾಗೂ ಕ್ರಾಂತಿನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಹೊಸ ರಸ್ತೆಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ಥಳೀಯರ ಜೊತೆ ಮಾತುಕತೆ ನಡೆಸಿದರು. ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.



