ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಗಣೇಶ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಗಣೇಶೋತ್ವಸ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಇಂದೇ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೆಕು ಎಂಬ ಒತ್ತಾಯ ಕೇಳಿಬರುತ್ತಿವೆ. ಈ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಈಗಾಗಲೇ ಒಂದು ಸುತ್ತಿನ ಚರ್ಚೆ ನಡೆಸಿದ್ದು, ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವ ಆಚರಣೆ ಅವಕಾಶ ನೀಡದಂತೆ ತಜ್ಞರು ಸಿಎಂ ಗೆ ಸಲಹೆ ನೀಡಿದ್ದಾರೆ. ಅಲ್ಲದೇ ಗಣೇಶ ಮೂರ್ತಿ ತರುಗಾವ ಯಾವುದೇ ಮೆರವಣಿಗೆ ಹಾಗೂ ಪ್ರತಿಷ್ಠಾಪನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮೂಲಗಳ ಪ್ರಕಾರ ಷರತ್ತುಬದ್ಧ ನಿಯಮಗಳನ್ನು ಹೇರಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ.
ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ