
ಪ್ರಗತಿವಾಹಿನಿ ಸುದ್ದಿ: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ನಡೆದಿದೆ.
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು, ಕೃತ್ಯದ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಘಟನೆ ನಡೆದ ಒಂದು ದಿನದ ಬಳಿಕ ಸಂತ್ರಸ್ತೆ ದೂರು ನೀಡಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷನರ್ ಶಶಿಕುಮಾರ್, ಜನವರಿ ೯ರಂದುಹುಬ್ಬಳ್ಳಿಯ ಅಂಬೇಡ್ಕರ್ ಮೈದಾನದ ಬಳಿಯಿಂದ ಇಬ್ಬರು ಯುವಕರು ಮಹಿಳೆಯನ್ನು ಆಟೋದಲ್ಲಿ ಕರೆದೊಯ್ದಿದ್ದರು. ಬಳಿಕ ಆಕೆಗೆ ಮದ್ಯಪಾನ ಮಾಡಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಕೃತ್ಯದ ವಿಡಿಯೋ ಮಾಡಿಕೊಂಡು ಹರಿಬಿಟ್ಟಿದ್ದಾಗಿ ಮಹಿಳೆ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ ಎಂದು ತಿಳೀಸಿದ್ದಾರೆ.




