
ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನೆ ಬೆಚ್ಚಿಬಿಳಿಸಿದ ಸಿಲಿಕಾನ್ ಸಿಟಿಯಲ್ಲಿ ನಡೆದ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಜನ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ನವೀನ್, ಕಾರ್ತಿಕ್, ಸುಯೋಗ, ಸೀನ, ಜಂಗ್ಲಿ, ಪೃಥ್ವಿ ಎಂದು ಗುರುತಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಮಂಗಳವಾರ ರಾತ್ರಿ 9.15 ರಿಂದ ಮಧ್ಯರಾತ್ರಿಯ ನಡುವೆ ದೌರ್ಜನ್ಯ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಆರೋಪಿಗಳು ಹೇಯ ಕೃತ್ಯವೆಸಗಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅತ್ಯಾಚಾರವೆಸಗಿದವರಿಗಾಗಿ ಬಲೆ ಬಿಸಿದ್ದರು, ಇದೀಗ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆದರೆ ಎ-1 ಆರೋಪಿ ಮಿಥುನ್ ಹಾಗೂ ಮತ್ತೋರ್ವ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.