Belagavi NewsBelgaum NewsKarnataka News

*ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಸಿಪಿಐ ಮಗ ಸೇರಿ ಮೂವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಹೊರ ಜಿಲ್ಲೆಯ ಸಿಪಿಐ ಮಗ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರೋ ಸಿಪಿಐ ಪುತ್ರ ಅಪ್ರಾಪ್ತ ಆರೋಪಿ ಸೇರಿದಂತೆ ರೆಸಾರ್ಟ್ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನವಾಗಿದೆ. ಬೆಳಗಾವಿ ಹೊರ ವಲಯದ ರೆಸಾರ್ಟ್ ನಲ್ಲಿ ಸಾಕೀಬ್ ಎಂಬಾತ ಸೇರಿ ಇಬ್ಬರು ಅಪ್ರಾಪ್ತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. 

ಪ್ರಕರಣ ದಾಖಲಾಗುತ್ತಿದ್ದಂತೆ ಸಾಕೀಬ್ ಸೇರಿ ಓರ್ವ ಅಪ್ರಾಪ್ತನನ್ನ ಅರೆಸ್ಟ್ ಮಾಡಿದ್ದ ಪೊಲೀಸರು ಈಗ ಸಿಪಿಐ ಪುತ್ರ ಸೇರಿ ರೆಸಾರ್ಟ್ ನಡೆಸುತ್ತಿದ್ದವರನ್ನು ಬಂಧಿಸಿದ್ದಾರೆ. ಅಪ್ರಾಪ್ತರಿಗೆ ರೆಸಾರ್ಟ್ ಕೊಟ್ಟಿದ್ದ ರೋಹನ್ ಪಾಟೀಲ್, ಅಶತೋಷ ಪಾಟೀಲ್ ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ. 

ಮನೆಯೊಂದನ್ನು ಬಾಡಿಗೆ ಪಡೆದು ತಿಂಗಳಿಗೆ 20 ಸಾವಿರಕ್ಕೆ ರೆಸಾರ್ಟ್ ಆಗಿ ಪರಿವರ್ತನೆ ಮಾಡಿದ್ದರು. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಸಿಪಿಐ ಪುತ್ರನನ್ನು ರಿಮ್ಯಾಂಡ್ ಹೊಮ್ ‌ನಲ್ಲಿ ಇಡಲಾಗಿದೆ‌.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button