
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇನ್ನೆರಡು ದಿನಗಳಲ್ಲಿ ಶಾಲೆ ಪುನರಾರಂಭದ ಬಗ್ಗೆ ನಿರ್ಧರಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, 1 ರಿಂದ 5 ನೇ ತರಗತಿ ಶಾಲೆ ಆರಂಭಿಸುವ ಬಗ್ಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳಲಿದೆ ಎಂಬುದನ್ನು ನೀಡಬೇಕಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇನ್ನೆರಡು ದಿನಗಳಲ್ಲಿ ತೀರ್ಮಾನ ಪ್ರಕಟಿಸಲಾಗುವುದು ಎಂದರು.
ದೇವರ ದಯೆಯಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಿದೆ. ಹಲವು ಜಿಲ್ಲೆಗಳಲ್ಲಿ ಪಾಸಿಟಿವಿಟಿ ಶೂನ್ಯವಾಗಿದೆ. ಹೀಗಾಗಿ ಶಾಲೆ ಆರಂಭದ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶನಿವಾರ, ಭಾನುವಾರ ತರಗತಿ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಪಠ್ಯ ಕಡಿತದ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಹೇಳಿದರು.
ವಿವಿಗಳಲ್ಲಿ ಸಿಂಡಿಕೇಟ್ ಸದಸ್ಯರಾಗಿ ಆರ್.ಎಸ್.ಎಸ್ ಕಾರ್ಯಕರ್ತರ ನೇಮಕ
ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ