Kannada NewsLatestNational

*ಯುವತಿ ಮೇಲೆ ಗ್ಯಾಂಗ್ ರೇಪ್: ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳಿಂದಲೇ ಕೃತ್ಯ*

ಪ್ರಗತಿವಾಹಿನಿ ಸುದ್ದಿ: ಯುವತಿಯಿಬ್ಬಳನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳೇ ಅತ್ಯಾಚಾರವೆಸಗಿರುವ ಘೋರ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ತಿರುವನ್ನಾಮಲೈ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ ಟೇಬಲ್ ಈ ಕೃತ್ಯವೆಸಗಿದ್ದಾರೆ. 19 ವರ್ಷದ ಯುವತಿ ಮೇಲೆ ಪೊಲೀಸರೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಸುಂದರ್ ಹಾಗೂ ಸುರೇಶ್ ಆರೋಪಿ ಪೊಲೀಸರು. ಟ್ರಕ್ ವೊಂದರಲ್ಲಿ ಯುವತಿ ತನ್ನ ಕುಟುಂಬದವರೊಂದಿಗೆ ಪ್ರಯಾಣಿಸುತ್ತಿದ್ದಳು. ಈ ವೇಳೆ ತಪಾಸಣೆಗೆಂದು ಟ್ರಕ್ ನಿಲ್ಲಿಸಿದ ಪೊಲೀಸರು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಈ ಕ್ರುತ್ಯವೆಸಗಿದ್ದಾರೆ.

ಘಟನೆಯಿಂದ ಆಘಾತಕ್ಕೊಳಗಾದ ೦ಸಂತ್ರಸ್ತ ಯುವತಿ ಕಷ್ಟಪಟ್ಟು ನಡೆದುಕೊಂಡು ತನ್ನ ಗ್ರಾಮವನ್ನು ತಲುಪಿದ್ದಾಳೆ. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಯುವತಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಆರೋಪಿಗಳಾದ ಸುಂದರ್ ಹಾಗೂ ಸುರೇಶ್ ನನ್ನು ಬಂಧಿಸಿದ್ದಾರೆ. ಇಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button