Kannada NewsKarnataka NewsLatest
*ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಮಹಿಳೆಯ ಪತಿಯನ್ನು ಕಟ್ಟಿಹಾಕಿ, ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿ ಮಿಥುನ್ ತಲೆಮರೆಸಿಕೊಂಡಿದ್ದ.
ನೆಲಮಂಗಲ ತಾಲೂಕಿನ ಶಿವಗಂಗೆ ಬಳಿ ತಲೆಮರೆಸಿಕೊಂಡಿದ್ದ ಆರೋಪಿ ಮಿಥುನ್ ನನ್ನು ನೆಲಮಂಗಲ ಡಿವೈಎಸ್ ಪಿ ಜಗದೀಶ್ ನೇತೃತ್ವದ ತಂಡ ಬಂಧಿಸಿದೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರು ಆರೋಪಿಗಳನ್ನು ಬಂಧಿಸಲಗೈದ್ದು, ಅವರಲ್ಲಿ ಇಬ್ಬರು ಅಪ್ರಾಪ್ತ ಬಾಲಕರು. ಅವರನ್ನು ಬಾಲಾಪರಾಧಿ ಕಾರಾಗೃಹದಲ್ಲಿ ಇರಿಸಲಾಗಿದೆ. ಉಳಿದ ಆರೋಪಿಗಳಾದ ಮಿಥುನ್, ಕಾರ್ತಿಕ್, ನವೀನ್, ಗ್ಯಾನಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.



