*ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ; 20ಕ್ಕೂ ಹೆಚ್ಚು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 20ಕ್ಕೂ ಹೆಚ್ಚು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಸಿರೋಹಿಯಲ್ಲಿ ನಡೆದಿದೆ.
ಸಿರೋಹಿ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷ ಮಹೇಂದ್ರ ಮೇವಾಡ ಹಾಗೂ ಪುರಸಭೆ ಮಾಜಿ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಗ್ಯಾಂಗ್ ರೇಪ್ ಆರೋಪ ಕೇಳಿಬಂದಿದೆ.
ಅಂಗನವಾಡಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯರನ್ನು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಪಾಲಿ ಜಿಲ್ಲೆಯ ಮಹಿಳೆಯೊಬ್ಬರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಕೆಲಸ ಕೊಡಿಸುವುದಾಗಿ ಕರೆದೊಯ್ದು ತನ್ನನ್ನೂ ಸೇರಿ 20ಕ್ಕೂ ಹೆಚ್ಚು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಕೃತ್ಯವನ್ನು ರೆಕಾರ್ಡ್ ಮಾಡಿಕೊಂಡಿರುವ ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗನವಾಡಿ ಕೆಲಸ ಕೊಡಿಸುವುದಾಗಿ ಹೇಳಿ ಕರೆದೊಯ್ದು ವಸತಿ, ಊಟ ನೀಡಿ ಬಳಿಕ ಅತ್ಯಾಚಾರವೆಸಗಿದ್ದು, ಆರೋಪಿಗಳು ಕೊಟ್ಟಿರುವ ಆಹಾರದಲ್ಲಿ ಮತ್ತು ಬರುವ ಔಷಧಿ ಬೆರಸಿ ಕೃತ್ಯವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ರಾಜಸ್ಥಾನದ ಹೈಕೋರ್ಟ್ 8 ಮಹಿಳೆಯರ ಅರ್ಜಿಯ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳುವಂತೆ ಆದೇಶ ನೀಡಿದ್ದು, ತನಿಖೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ