LatestNational

*ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅಟ್ಟಹಾಸ ಮೆರೆದು ಗ್ಯಾಂಗ್ ರೇಪ್ ನಡಿಸಿದ್ದ ಘಟನೆ ಉತ್ತರಪ್ರದೆಶದ ಭೋಜಿಪುರದಲ್ಲಿ ನಡೆದಿದ್ದು, ಈ ಘಟನೆ ಬಳಿಕ ಸಂತ್ರಸ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಟ್ಟೆ ಒಣಗಿಸಲೆಂದು ಹೋಗಿದ್ದ 13 ವರ್ಷದ ಬಾಲಕಿಯನ್ನು ಕಬ್ಬಿನಗದ್ದೆಗೆ ಎಳೆದೊಯ್ದು ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದರು. ಬಾಲಕಿ ಕಿರುಚಾಡುತ್ತಿದ್ದಂತೆ ಆಕೆಯ ಸಹೋದರಿ ಘಟನಾ ಸ್ಥಳಕ್ಕೆ ತೆರಳುತ್ತಿದ್ದಂತೆ ಕಾಮುಕರು ಪರಾರಿಯಾಗಿದ್ದರು.

ಘಟನೆ ಬಳಿಕ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ಸಂತ್ರಸ್ತ ಮೃತ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ.

ಅಂಕಿತ್ ಹಾಗೂ ಪಂಕಜ್ ಎಂಬ ಯುವಕರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button