Kannada NewsKarnataka NewsLatest

*ನಡುರಸ್ತೆಯಲ್ಲೇ ಗ್ಯಾಂಗ್ ವಾರ್: ಕಾರುಗಳ ನಡುವೆ ಗುದ್ದಾಟ, ಮಚ್ಚು ಬೀಸಿ ಹೊಡೆದಾಟ*

ಪ್ರಗತಿವಾಹಿನಿ ಸುದ್ದಿ: ವಾರದ ಹಿಂದೆ ಶಿಕ್ಷಣ ನಗರಿ ಉಡುಪಿಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್‌ವಾರ್‌ನ ವಿಡಿಯೋ ಇದೀಗ ಜನರನ್ನು ಬೆಚ್ಚಿ ಬೀಳಿಸಿದೆ. ಉಡುಪಿ ನಗರದಲ್ಲೇ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಕುಂಜಿಬೆಟ್ಟು ರಸ್ತೆಯಲ್ಲಿ ರಾತ್ರಿ ವೇಳೆ ಎರಡು ಗ್ಯಾಂಗ್‌ಗಳು ಹೊಡೆದಾಡಿಕೊಂಡಿವೆ. 

Related Articles

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ–ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ಉಡುಪಿ ನಗರದಲ್ಲಿ ಸಿನಿಮಾ‌ ಮಾದರಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದ್ದು, ಈಗಾಗಲೇ ಎರಡು ತಂಡಗಳ ಸದಸ್ಯರನ್ನು ಬಂಧಿಸಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Home add -Advt

Related Articles

Back to top button