ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರಕ್ಕೆ ನೀರು ಪೂರೈಸುವ ಪ್ರಮುಖ ಜಲಾಶಯವಾಗಿರುವ ರಾಕಸಕೊಪ್ಪ ಜಲಾಶಯಕ್ಕೆ ಗಂಗಾಪೂಜೆ ಸಲ್ಲಿಸಲು ನಿರ್ಧರಿಸಲಾಗಿದೆ.
ಈ ವರ್ಷ ಮಳೆ ತಡವಾಗಿದ್ದರಿಂದ ರಾಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ಅತ್ಯಂತ ಕಡಿಮೆಯಾಗಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿತ್ತು. ಆದರೆ ಮಳೆ ಆರಂಭವಾಗಿ ವಾರದೊಳಗೆ ಜಲಾಶಯ ಭರ್ತಿಯಾಗಿದೆ. ಹಾಗಾಗಿ ಈಗ ಸಂಪ್ರದಾಯದಂತೆ ಜಲಾಶಯದಲ್ಲಿ ಗಂಗಾಪೂಜೆ ನೆರವೇರಿಸಲು ನಿರ್ಧರಿಸಲಾಗಿದೆ.
ಆಗಸ್ಟ್ 1ರಂದು ಬೆಳಗ್ಗೆ 10. ಗಂಟೆಗೆ ಗಂಗಾಪೂಜೆ ನಡೆಯಲಿದೆ. ಪಾಲಿಕೆಯ ಮಹಾಪೌರರ ಗಂಗಾಪೂಜೆ ನೆರವೇರಿಸಲಿದ್ದು, ಜಿಲ್ಲೆಯ ಸಚಿವರು, ನಗರದ ಶಾಸಕರು, ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ