ಪ್ರಗತಿವಾಹಿನಿ ಸುದ್ದಿ; ಜೈಪುರ: ದೇಶವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ಸನಿಟೇಶನ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಗೆ ಡ್ರಗ್ಸ್ ನೀಡಿ ಐವರು ಗ್ಯಾಂಗ್ ರೇಪ್ ನಡೆಸಿರುವ ಘೋರ ಘಟನೆ ಜೈಪುರದಲ್ಲಿ ನಡೆದಿದೆ.
ಶ್ಯಾಮ್ ನಗರದ ರಿಂಗ್ ರೋಡ್ ಬಳಿ ಕರೆದೊಯ್ದು ಬಲವಂತದಿಂದ ಡ್ರಗ್ಸ್ ನೀಡಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಎಂದು ಸಂತ್ರಸ್ತ ಯುವತಿ ಶ್ಯಾಮ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಒಂಭುತ್ತು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಪರ ಆಪ್ತರ ಮನವಿ; ಸಚಿವ ಸ್ಥಾನ ನೀಡುವಂತೆ ಆಗ್ರಹ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ