Latest

*ಪೊಲೀಸ್ ಠಾಣೆ ಆವರಣದಲ್ಲಿಯೇ ಮಾರಾಮಾರಿ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಠಾಣೆಯ ಆವಣದಲ್ಲಿಯೇ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಮಾರಾಮಾರಿ ನಡೆದ ಘಟನೆ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

Home add -Advt

ಕೊಪ್ಪಳ ಜಿಲ್ಲೆ ಗಂಗಾವತಿಯ ಪೊಲೀಸ್ ಠಾಣೆ ಆವರಣದಲ್ಲಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳು ಕೈಕೈ ಮಿಲಾಯಿಸಿಕೊಂಡಿದ್ದು, ಹೊಡೆದಾಡಿಕೊಂಡಿದ್ದಾರೆ.

ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಎರಡೂ ಗುಂಪಗಳ ಜನರನ್ನು ವಶಕ್ಕೆ ಪಡೆದಿದ್ದಾರೆ.


Related Articles

Back to top button