Kannada NewsKarnataka NewsLatest

*ಗಾಂಜಾ ಮಾರಾಟ ಮಾಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆರೋಪಿ*

2 ಕೆ.ಜಿ ಗಾಂಜಾ ವಶ

ಪ್ರಗತಿವಾಹಿನಿ ಸುದ್ದಿ; ಮುಂಡಗೋಡ: ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 2 ಕೆ.ಜಿ ಗಾಂಜಾ ಹಾಗೂ ಆರೋಪಿಯನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಹತ್ತಿರ ನಡೆದಿದೆ.

ಹಾನಗಲ್ ತಾಲೂಕಿನ ತಿರವಳ್ಳಿ ಗ್ರಾಮದ ಸಲ್ಮಾನಖಾನ ಆಲೂರ(24) ಬಂಧಿತ ಆರೋಪಿ. ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಹತ್ತಿರ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದಾಗ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

Home add -Advt

ಸಿಪಿಐ ಬಿ.ಎಸ್‌. ಲೋಕಾಪುರ ನಿರ್ದೇಶನದಂತೆ ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ ಮತ್ತು ಹನಮಂತ ಕುಡಗುಂಚಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಣಪತಿ ಹೊನ್ನಳ್ಳಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬಡಗೇರ, ಬಸವರಾಜ ಲಮಾಣಿ, ಸಂಜು ರಾಠೋಡ ಗುರುರಾಜ ಬಿ ಸೇರಿದಂತೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button