
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ ತಾಲೂಕಿನ ಕುಲಗೋಡದಲ್ಲಿ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಬೆಳೆಯ ಮಧ್ಯೆ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಇಬ್ಬರನ್ನು ವಶಪಡಿಸಿಕೊಂಡು 95.1 ಕೆಜಿ ಗಾಂಜಾ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಕಬ್ಬಿನ ಬೆಳೆ ಮಧ್ಯದಲ್ಲಿ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ.
ಆರೋಪಿತರ ವಿರುದ್ಧ ಎನ್ ಡಿಪಿಎಸ್ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಸಂಜೀವ ಪಾಟೀಲ ಮಾಹಿತಿ ನೀಡಿದ್ದಾರೆ.
ಭಾರಿ ಮಳೆ; ಪ್ರವಾಹ ಭೀತಿ; ಹಲವೆಡೆ ಭೂಕುಸಿತ; ಶಾಲಾ-ಕಾಲೇಜಿಗೆ ರಜೆ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ