Kannada NewsKarnataka NewsLatest

*ಲವ್ ಜಿಹಾದ್ ಪ್ರಕರಣ: ಸಿಪಿಐ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಧಾರವಾಡ ಜಿಲ್ಲಾ ಪೊಲೀಸ್ ಎಸ್‌ಪಿ ಗುಂಜನ್ ಆರ್ಯ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆಯಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸಿಪಿಐ ಶಿವಯೋಗಿ ಲೋಹಾರ್ ವಿರುದ್ಧ ಇಲಾಖೆ ಕ್ರಮ ಕೈಗೊಂಡಿದೆ.

Home add -Advt

Related Articles

Back to top button