Latest

ಅಡುಗೆ ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಯಲಚೇನಹಳ್ಳಿ ಕೆ ಎಸ್ ಲೇಔಟ್ ನಲ್ಲಿ ನಡೆದಿದೆ.

ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಬಿಹಾರ ಮೂಲದ ಗೌತಮ್ ಹಾಗೂ ಸೋನಿ ಎಂದು ಗುರುತಿಸಲಾಗಿದೆ.

ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬೆಳಿಗ್ಗೆ ಅಡುಗೆ ಮಾಡುವಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಕೆ ಎಸ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

https://pragati.taskdun.com/latest/special-protection-of-children-from-sexual-offenses-actcourt-judgefound-hangingofficial-residence/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button