Uncategorized

ಗ್ಯಾಸ್ ಸಿಲಿಂಡರ್ ಸ್ಫೋಟ; 6 ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ, ತುಮಕೂರು: ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮನೆಯ ಛಾವಣಿ ಕುಸಿದು ಬಿದ್ದು 6 ಜನರಿಗೆ ಗಾಯಗೊಂಡ ಘಟನೆ ಶಿರಾದ ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾ ಬಡಾವಣೆಯಲ್ಲಿ ನಡೆದಿದೆ.

ನಜೀರ್ ಎಂಬುವವರ ಮನೆಯಲ್ಲಿ ರಾತ್ರಿ ಸಿಲಿಂಡರ್‌ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿತ್ತು. ಇದನ್ನು ಗಮನಿಸದೆ ಬೆಳಗ್ಗೆ ಗ್ಯಾಸ್ ಒಲೆ ಹಚ್ಚುವ ವೇಳೆಯಲ್ಲಿ ಬೆಂಕಿ ಆವರಿಸಿಕೊಂಡ ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿತು. ಸ್ಫೋಟದ ರಭಸಕ್ಕೆ ಮನೆಯ ಛಾವಣಿ ಹಾಗೂ ಗೋಡೆ ಕುಸಿತಕ್ಕೊಳಗಾಗಿದ್ದು ಮನೆಯಲ್ಲಿದ್ದ 6 ಜನ ಗಾಯಗೊಂಡಿದ್ದಾರೆ. 

Home add -Advt

ಗಾಯಾಳುಗಳಿಗೆ ಕೂಡಲೆ ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಫೋಟದ ಘಟನೆ ಬಗ್ಗೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಾಂಬ್ ನಿಷ್ಟ್ರೀಯ ದಳದವರು ಆಗಮಿಸಿ ಪರಿಶೀಲನೆ ನಡೆಸಿ ಇದು ಗ್ಯಾಸ್ ಸಿಲಿಂಡರ್ ನಿಂದ ಸಂಭವಿಸಿದ ಸ್ಫೋಟ ಎಂದು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button