*ಗ್ಯಾಸ್ ಸಿಲಿಂಡರ್‌ ಸ್ಫೋಟ*: *ಆರು ಕಾರ್ಮಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮುಂಜಾನೆ ಗಾಢ ನಿದ್ದೆಯಲ್ಲಿದ್ದ ಕಾರ್ಮಿಕರು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಆರು ಮಂದಿ ಕಟ್ಟಡ ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಸಿಮೆಂಟ್ ಶೀಟ್‌ಗಳು ಛಿದ್ರಗೊಂಡಿದ್ದು, ಮನೆಯಲ್ಲಿದ್ದ ಬಟ್ಟೆಬರೆ ಹಾಗೂ ಇತರ ವಸ್ತುಗಳು ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಜುನಾಥ ಎಂಬುವರಿಗೆ ಸೇರಿದ ಮನೆಯಲ್ಲಿ ಉತ್ತರ ಭಾರತದ ಮೂಲದ ಕಟ್ಟಡ ಕಾರ್ಮಿಕರು ಬಾಡಿಗೆಗೆ ವಾಸವಿದ್ದರು. ಸೋಮವಾರ ಮುಂಜಾನೆ ಸುಮಾರು 3 ಗಂಟೆಯ … Continue reading *ಗ್ಯಾಸ್ ಸಿಲಿಂಡರ್‌ ಸ್ಫೋಟ*: *ಆರು ಕಾರ್ಮಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ*