ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೀಸರ್ ಸೋರೊಕೆಯಾಗಿ ಅಮ್ಮ-ಮಗಳಿಬ್ಬರೂ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ನಡೆದಿದೆ.
35 ವರ್ಷದ ಮಂಗಳಾ ಹಾಗೂ 7 ವರ್ಷದ ಗೌತಮಿ ಮೃತ ಅಮ್ಮ-ಮಗಳು. ಪತಿ ನರಸಿಂಹಮೂರ್ತಿ ಕೆಲಸಕ್ಕೆ ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.
ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾದ ಪರಿಣಾಮ ತಾಯಿ ಹಾಗೂ ಮಗಳು ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಕೇಶ್ವರದಲ್ಲಿ ಶೂಟೌಟ್; ಮಹಿಳೆಗೆ ಗುಂಡಿಟ್ಟು ಬರ್ಬರ ಹತ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ