
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ಯಾಸ್ ಗೀಜರ್ ನಿಂದ ವಿಷಾನೀಲ ಸೋರಿಕೆಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿ ನಗರದಲ್ಲಿ ನಡೆದಿದೆ.
23 ವರ್ಷದ ರಾಜೇಶ್ವರಿ ಮೃತ ಯುವತಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ತನ್ನ ಅಣ್ಣನ ಮದುವೆಗೆಂದು ರಜೆ ಹಾಕಿ ಮದುವೆ ಸಿದ್ಧತೆಯಲ್ಲಿ ತೊಡಗಿದ್ದಳು.
ಸ್ನಾನಕ್ಕೆಂದು ಬಾತ್ ರೂಮಿಗೆ ಹೋದ ಯುವತಿ ಗ್ಯಾಸ್ ಗೀಜರ್ ನಿಂದ ವಿಷಾನಿಲ ಸೋರಿಕೆಯಾಗಿ ಪ್ರಜ್ಞೆ ತಪ್ಪಿ ಬಿದ್ದಿದಾಳೆ. ತಕ್ಷಣ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಯುವತಿ ಸಾವನ್ನಪ್ಪಿದ್ದಳು.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ