Kannada NewsKarnataka NewsLatest

*ಗ್ಯಾಸ್ ಗೀಸರ್ ಸೋರಿಕೆಯಾಗಿ ದುರಂತ: ಸ್ನಾನಕ್ಕೆ ಹೋಗಿದ್ದ ಯುವತಿ ಸಾವು*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ನಾನಕ್ಕೆ ಹೋಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಎನ್ ಎನ್ ಟಿ ಬಡಾವಣೆಯಲ್ಲಿ ಈ ದುರಂತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಮೇಘನಾ (25) ಮೃತ ಯುವತಿ.

ಕೆಲಸದ ನಿಮಿತ್ತ ಬೆಂಗಳೂರಿನ ಪಿಜಿಯಲ್ಲಿ ವಾಸವಾಗಿದ್ದ ಮೇಘನಾಳಿಗೆ ನೆಲಮಂಗಲದಲ್ಲಿ ವಾಸವಾಗಿದ್ದ ಸತೀಶ್ ಎಂಬಾತನ ಜೊತೆ ಮದುವೆ ಮಾತುಕತೆ ಪ್ರಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ ಮೇಘನಾ ಸತೀಶ್ ಮನೆಗೆ ಹೋಗಿದ್ದಳು. ಸ್ನಾನಕ್ಕೆ ತೆರಳಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿದ್ದು, ಉಸಿರುಗಟ್ಟಿ ಯುವತಿ ಸಾವನ್ನಪ್ಪಿದ್ದಾರೆ.

Home add -Advt

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತಿದೆ.


Related Articles

Back to top button